ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಎತ್ತರಕ್ಕೆ ಉತ್ತರಾಖಂಡ ಅಭಿವೃದ್ಧಿ: ಮೋದಿ

ವಿಧಾನಸಭಾ ಚುನಾವಣೆ: ತಾಲೀಮು ಆರಂಭಿಸಿದ ಬಿಜೆಪಿ
Last Updated 7 ಅಕ್ಟೋಬರ್ 2021, 10:48 IST
ಅಕ್ಷರ ಗಾತ್ರ

ಹೃಷಿಕೇಶ, ಉತ್ತರಾಖಂಡ: ‘ಉತ್ತರಾಖಂಡದ ಆಡಳಿತ ಚುಕ್ಕಾಣಿ ಹಿಡಿದಿರುವ ಹೊಸ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುವುದು. ‘ಡಬಲ್‌ ಎಂಜಿನ್‌’ ಚಾಲಿತ ರಾಜ್ಯದ ಅಭಿವೃದ್ಧಿ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ವರ್ಚುವಲ್‌ ಆಗಿ ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೋವಿಡ್‌ನ 2ನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಯಿತು. ಇದಕ್ಕೆ ಪ್ರತಿಯಾಗಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಪಿಎಂ ಕೇರ್ಸ್‌ ನಿಧಿ ನೆರವಿನಿಂದ 1,150 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲೆಯೂ ಇಂಥ ಘಟಕ ಹೊಂದಿದಂತಾಗಿದೆ’ ಎಂದು ಹೇಳಿದರು.

‘ಉತ್ತರಾಖಂಡ ರಾಜ್ಯ ರಚನೆಯಾಗಿ ಇನ್ನೇನು 25 ವರ್ಷಗಳು ತುಂಬಲಿವೆ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ, ಬರುವ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನರು ಹೆಜ್ಜೆ ಹಾಕುವುದು ಅಗತ್ಯ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT