ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ–ಹುಬ್ಬಳ್ಳಿ ಜೋಡಿ ರೈಲು ಮಾರ್ಗ ಪ್ರಗತಿಯಲ್ಲಿ: ಅಶ್ವಿನಿ ವೈಷ್ಣವ್

Last Updated 19 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ನವದೆಹಲಿ: ಯಶವಂತಪುರ–ಹುಬ್ಬಳ್ಳಿ ರೈಲು ಮಾರ್ಗವನ್ನು ಜೋಡಿ ಮಾರ್ಗವನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯನ್ನು ಹಂತಹಂತವಾಗಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ರಾಜ್ಯಸಭಾ ಸದಸ್ಯ ಕೆ.ನಾರಾಯಣ ಅವರ ಪ್ರಶ್ನೆಗೆ ಸಂಸತ್‌ನಲ್ಲಿ ಉತ್ತರಿಸಿದ ಅವರು, ಈ ಮಾರ್ಗದ ಪೈಕಿ ಚಿಕ್ಕಜಾಜೂರು–ಅರಸೀಕೆರೆ, ತುಮಕೂರು–ಯಶವಂತಪುರ ನಡುವೆ ಜೋಡಿ ಮಾರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಶವಂತಪುರ–ಚಿಕ್ಕಬಾಣಾವರ–ತುಮಕೂರು ನಡುವಿನ ಮಾರ್ಗದ ವಿದ್ಯುದೀಕರಣ ಕಾರ್ಯವು ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

‘ತುಮಕೂರು–ಯಶವಂತಪುರ ನಡುವೆ ಮೆಮು ರೈಲು ಓಡಿಸುವ ಯಾವುದೇ ಪ್ರಸ್ತಾವ ಇಲ್ಲ’ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದೇ ವೇಳೆ ಅವರು, ವಿವಿಧ ರೈಲು ಮಾರ್ಗಗಳ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿಯನ್ನೂ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT