ಭಾನುವಾರ, ಜುಲೈ 3, 2022
27 °C

ಬರುತ್ತಿದೆ ಡಿಜಿಟಲ್ ವೋಟರ್ ಐಡಿ ಕಾರ್ಡ್; ಮೊಬೈಲ್‌ನಿಂದಲೇ ಡೌನ್‌ಲೋಡ್!

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮತದಾರರ ಗುರುತಿನ ಚೀಟಿಯ (ವೋಟರ್ ಐಡಿ ಕಾರ್ಡ್) ಡಿಜಿಟಲ್ ಆವೃತ್ತಿಯನ್ನು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಬಿಡುಗಡೆ ಮಾಡಲಿದ್ದಾರೆ. ಇದನ್ನು ಮೊಬೈಲ್ ಫೋನ್ ಅಥವಾ ವೈಯಕ್ತಿಕ ಕಂಪ್ಯೂಟರ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

'ಇ-ಎಲೆಕ್ಟರ್' ಫೋಟೊ ಗುರುತಿನ ಚೀಟಿಯು ಎಡಿಟ್ ಮಾಡಲಾಗದ ಮತದಾರರ ಡಿಜಿಟಲ್ ಗುರುತಿನ ಚೀಟಿಯಾಗಿದೆ. ಇದನ್ನು ಡಿಜಿಟಲ್ ಲಾಕರ್‌ನಂತಹ ಸೌಲಭ್ಯಗಳಲ್ಲಿ ಸೇವ್ ಮಾಡಬಹುದಾಗಿದೆ. ಹಾಗೆಯೇ ಪಿಡಿಆಫ್ ರೂಪದಲ್ಲಿ ಮುದ್ರಿಸಲು ಸಾಧ್ಯವಾಗಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು 'e-EPIC' (Elector Photo Identity Card) ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಐದು ಹೊಸ ಮತದಾರರಿಗೆ ಡಿಜಿಟಲ್ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಿದ್ದಾರೆ ಎಂದು ಚುನಾವಣಾ ಆಯೋಗವು ಭಾನುವಾರ ತಿಳಿಸಿದೆ.

ಸಾಮಾನ್ಯ ಮತದಾರರ ಗುರುತಿನ ಚೀಟಿಯನ್ನು ವಿತರಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ವೇಗವಾಗಿ ತಲುಪಿಸಲು ಹಾಗೂ ಸುಲಭವಾಗಿ ದಾಖಲೆಗಳನ್ನು ಒದಗಿಸಲು ಡಿಜಿಟಲ್ ಆವೃತ್ತಿಯು ಹೆಚ್ಚು ಅನುಕೂಲವಾಗಲಿದೆ.

ಇದನ್ನೂ ಓದಿ: 

ಇನ್ನು ಮುಂದೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸನ್ಸ್‌ನಂತೆಯೇ ಮತದಾರರ ಗುರುತಿನ ಚೀಟಿ ಡಿಜಿಟಲ್ ಆವೃತ್ತಿಗಳಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುತ್ತದೆ.

1993ನೇ ಇಸವಿಯಲ್ಲಿ ಪರಿಚಯಿಸಲಾದ ಮತದಾರರ ಫೋಟೊ ಗುರುತಿನ ಚೀಟಿಯು ವ್ಯಕ್ತಿಯ ಗುರುತು ಹಾಗೂ ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಚುನಾವಣಾ ಆಯೋಗದ ವಾರ್ಷಿಕೋತ್ಸವದ ಅಂಗವಾಗಿ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಚುನಾವಣಾ ಆಯೋಗವು 1950ನೇ ಇಸವಿಯ ಜನವರಿ 25ರಂದು ಅಸ್ತಿತ್ವಕ್ಕೆ ಬಂದಿತ್ತು. ಕಳೆದ ಕೆಲವು ವರ್ಷಗಳಿಂದ ಇದೇ ದಿನವನ್ನು ರಾಷ್ಟ್ರೀಯ ಮತದಾರರ ದಿನವಾಗಿಯೂ ಆಚರಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು