ಲಖನೌ: ಸುಳ್ಳು ಆಪಾದನೆಗಳನ್ನು ಹೊರಿಸಿ ಉತ್ತರ ಪ್ರದೇಶ ಸರ್ಕಾರ ತನ್ನನ್ನು ಮತ್ತೆ ಜೈಲಿಗಟ್ಟಬಹುದು, ಏಕೆಂದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಗುವಿನಂತೆ ‘ಹಠಮಾರಿ’ ಎಂದು ಗೋರಖ್‌ಪುರ ಮೂಲದ ವೈದ್ಯ ಕಫೀಲ್ ಖಾನ್ ವ್ಯಂಗ್ಯವಾಡಿದ್ದಾರೆ.
ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ(ಎಎಂಯು) ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಪ್ರಚೋದನಾತ್ಮಕ ಭಾಷಣವನ್ನು ಮಾಡಿದ್ದಾರೆ ಎಂಬ ಆರೋಪದಡಿ ಕಫೀಲ್ ಅವರನ್ನು ಮುಂಬೈನಲ್ಲಿ ಕಳೆದ ಜನವರಿಯಲ್ಲಿ ಬಂಧಿಸಲಾಗಿತ್ತು. ಅವರ ಮೇಲಿದ್ದ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದ್ದು, ತಕ್ಷಣದಲ್ಲೇ ಅವರನ್ನು ಬಿಡುಗಡೆಗೊಳಿಸುವಂತೆ ನಿರ್ದೇಶಿಸಿತ್ತು. ಮಂಗಳವಾರ ರಾತ್ರಿ ಅವರು ಬಿಡುಗಡೆಯಾಗಿದ್ದಾರೆ.
‘ನನ್ನನ್ನು ಬಂಧಿಸಿದ ಬಳಿಕ ಐದು ದಿನಗಳ ಕಾಲ ಏನನ್ನೂ ತಿನ್ನಲು ನೀಡಿರಲಿಲ್ಲ. ಕಸ್ಟಡಿಯಲ್ಲೇ ನನಗೆ ಚಿತ್ರಹಿಂಸೆ ನೀಡಲಾಯಿತು. ಮುಂಬೈನಿಂದ ಉತ್ತರಪ್ರದೇಶಕ್ಕೆ ಕರೆದುಕೊಂಡು ಬರುವಾಗ ನನ್ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲದಿದ್ದುದ್ದಕ್ಕೆ ವಿಶೇಷ ಕಾರ್ಯಪಡೆಗೆ(ಎಸ್‌ಟಿಎಫ್) ಧನ್ಯವಾದ’ ಎಂದು ಕಫೀಲ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.