ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ: ಮುಖ್ಯಮಂತ್ರಿಯಾಗಿ ಮಾಣಿಕ್‌ ಸಹಾ ಪ್ರಮಾಣ ವಚನ

Last Updated 8 ಮಾರ್ಚ್ 2023, 17:50 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರಾದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮಾಣಿಕ್‌ ಸಹಾ (70) ಎರಡನೇ ಅವಧಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಸಂತಾನಾ ಚಕ್ಮಾ, ಬಿಕಾಶ್ ದೆಬ್ಬರ್ಮಾ ಮತ್ತು ಸುಕ್ಲಾ ಚರಣ್ ನೋಟಿಯಾ ಸೇರಿದಂತೆ ಎಂಟು ಸಚಿವರು ಸಹ ಸಿ.ಎಂ ಜತೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರು ಅಧಿಕಾರದ ಗೋಪ್ಯತೆ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಈ ವೇಳೆ ಉಪಸ್ಥಿತರಿದ್ದರು.

ಒಟ್ಟಾರೆ ಬಿಜೆಪಿಯ ಎಂಟು ಮತ್ತು ಮಿತ್ರ ಪಕ್ಷ ಐಪಿಎಫ್‌ಟಿಯ ಒಬ್ಬರು ಸಂಪುಟಕ್ಕೆ ಸೇರಿದಂತಾಗಿದೆ. ಸಂಪುಟದ ಒಂಬತ್ತು ಸದಸ್ಯರಲ್ಲಿ ನಾಲ್ವರು ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. ಹಿಂದಿನ ಸಂಪುಟದಲ್ಲಿದ್ದ ಐವರು ಈ ಬಾರಿಯೂ ಮುಂದುವರಿದಿದ್ದಾರೆ. ಬುಡಕಟ್ಟು ಸಮುದಾಯದ ಮೂವರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ.

ಸೆಪಹಿಜಾಲಾ ಜಿಲ್ಲೆಯ ಧನಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದಿರುವ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಪ್ರಮಾಣ ವಚನ ಸ್ವೀಕರಿಸಲಿಲ್ಲ. ಅದಾಗ್ಯೂ ಇನ್ನೂ ಮೂರು ಸಚಿವ ಸ್ಥಾನಗಳು ಖಾಲಿ ಇವೆ.

ಚುನಾವಣೋತ್ತರ ಹಿಂಸಾಚಾರ ವನ್ನು ಖಂಡಿಸಿ ವಿರೋಧ ಪಕ್ಷಗಳಾದ ಎಡಪಕ್ಷಗಳು ಮತ್ತು ಕಾಂಗ್ರೆಸ್‌ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸಿದ್ದವು. ತ್ರಿಪುರಾ ವಿಧಾನಸಭೆಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಹಾಗೂ ಅದರ ಮಿತ್ರ ಪಕ್ಷ ಐಪಿಎಫ್‌ಟಿ ಒಂದು ಕ್ಷೇತ್ರದಲ್ಲಿ ವಿಜಯ ಸಾಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT