ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ಗೆ ಪರ್ಯಾಯ ಚಿಕಿತ್ಸಾ ವಿಧಾನ: ಡಾ. ರೆಡ್ಡೀಸ್‌ ಲ್ಯಾಬೊರೇಟರಿಸ್ ಚಿಂತನೆ

Last Updated 23 ಮೇ 2021, 16:18 IST
ಅಕ್ಷರ ಗಾತ್ರ

ನವದೆಹಲಿ: ಪ್ರಮುಖ ಔಷಧ ಉತ್ಪಾದಕ ಸಂಸ್ಥೆ ಡಾ.ರೆಡ್ಡೀಸ್‌ ಲ್ಯಾಬೊರೇಟರಿಸ್‌ ಸಂಸ್ಥೆಯು ಕೋವಿಡ್ ರೋಗಿಗಳಿಗೆ ಪರ್ಯಾಯ ಚಿಕಿತ್ಸಾ ಕ್ರಮವನ್ನು ಅಭಿವೃದ್ಧಿಪಡಿಸುತ್ತಿದೆ. ಕೆಲವೇ ತಿಂಗಳಲ್ಲಿ ಬಿಡುಗಡೆ ಮಾಡುವ ವಿಶ್ವಾಸವನ್ನೂ ಹೊಂದಿದೆ.

ಸಾಂಕ್ರಾಮಿಕ ರೋಗ ಚಿಕಿತ್ಸೆಗಾಗಿ ಸಂಸ್ಥೆಯ ವಿವಿಧ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಅನಿಯಮಿತವಾಗಿ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಹೈದರಾಬಾದ್‌ ಮೂಲಕ ಸಂಸ್ಥೆಯು ಈಗಾಗಲೇ ‘ಸ್ಪುಟ್ನಿಕ್‌ ವಿ’ ಲಸಿಕೆ ಉತ್ಪಾದನೆಗೆ ಸಂಬಂಧಿಸಿದಂತೆ ದೇಶದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸೇರಿ ವಿವಿಧ ಸಂಸ್ಥೆಗಳ ಜೊತೆಗೆ ಸಹಭಾಗಿತ್ವವನ್ನು ಹೊಂದಿದೆ.

ಹೊಸ ಕೋವಿಡ್‌ಗೆ ಹೊಸ, ಪರ್ಯಾಯ ಚಿಕಿತ್ಸಾ ಕ್ರಮ ಕುರಿತೂ ಚಿಂತನೆ ನಡೆಸಿದ್ದೇವೆ. ನಾವು ವಿವಿಧ ಸಹಭಾಗಿತ್ವ ಹೊಂದಿದ್ದು, ಕೋವಿಡ್‌ಗೆ ನೂತನ ಚಿಕಿತ್ಸಾ ಕ್ರಮಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದೇವೆ’ ಎಂದು ಕಂಪನಿಯ ಸಹ ಅಧ್ಯಕ್ಷ ಮತ್ತು ವ್ಯವಸ್ಥಾಪ ನಿರ್ದೇಶಕ ಜಿ.ಪಿ.ಪ್ರಸಾದ್ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT