ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಮ ಕಾರಂತ ಬಡಾವಣೆ: 870 ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂ ನಿರ್ದೇಶನ

Last Updated 23 ಏಪ್ರಿಲ್ 2022, 20:33 IST
ಅಕ್ಷರ ಗಾತ್ರ

ನವದೆಹಲಿ: ನ್ಯಾ. ಎ.ವಿ. ಚಂದ್ರಶೇಖರ್ ಸಮಿತಿಯ 13ನೇ ವರದಿಯ ಶಿಫಾರಸಿನಂತೆ ಶಿವರಾಮ ಕಾರಂತ ಬಡಾವಣೆಯ 870 ಕಟ್ಟಡಗಳನ್ನು ಸಕ್ರಮಗೊಳಿಸುವಂತೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರಕ್ಕೆ(ಬಿಡಿಎ) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಹಾಗೂ ಸಂಜೀವ್ ಖನ್ನಾ ಅವರಿದ್ದ ಪೀಠವು, 4 ವಾರಗಳ ಒಳಗಾಗಿ ಸಮಿತಿಯ ಮೇಲ್ವಿಚಾರಣೆಯಡಿಪಾರದರ್ಶಕವಾಗಿ ಅರ್ಜಿದಾರರಿಗೆ ಸಕ್ರಮದ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಬಿಡಿಎ ಆಯುಕ್ತರಿಗೆ ಸೂಚಿಸಿದೆ.ಅಲ್ಲದೆ, ಸಮಿತಿಯೊಂದಿಗೆ ಚರ್ಚೆ ನಡೆಸಿದ ಬಳಿಕ ನಿರ್ಮಾಣದ ಸ್ವರೂಪಕ್ಕೆ ಸಂಬಂಧಿಸಿ 2 ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ವಸತಿ ಇಲಾಖೆಗೂ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT