ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ರೌಪದಿ ಮುರ್ಮು ಪ್ರಮಾಣವಚನ: ಮಲ್ಲಿಕಾರ್ಜುನ ಖರ್ಗೆಗೆ ನೀಡಿದ ಆಸನದ ಬಗ್ಗೆ ಆಕ್ಷೇಪ

ಅಕ್ಷರ ಗಾತ್ರ

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು (ಸೋಮವಾರ) ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ ಆಸನದ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ಖರ್ಗೆ ಅವರಿಗೆ ನೀಡಿದ ಆಸನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪ್ರತಿಪಕ್ಷಗಳು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿವೆ.

‘ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ ಆಸನವು ಅವರು ಹೊಂದಿರುವ ಸ್ಥಾನಕ್ಕೆ ಅನುಗುಣವಾಗಿರಲಿಲ್ಲ. ಶಿಷ್ಟಾಚಾರವನ್ನು ಪಾಲಿಸದಿರುವುದು ಮತ್ತು ಹಿರಿಯ ನಾಯಕನಿಗೆ ಅಗೌರವ ತೋರಿರುವುದರಿಂದ ಆಘಾತಕ್ಕೊಳಗಾಗಿದ್ದೇವೆ. ಈ ವಿಚಾರವಾಗಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸುವುದಕ್ಕಾಗಿ ಈ ಪತ್ರ ಬರೆಯುತ್ತಿದ್ದೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT