ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಆರ್‌ಡಿಒ ಸುಧಾರಿತ ಚಾಫ್‌ ತಂತ್ರಜ್ಞಾನ ಅಭಿವೃದ್ಧಿ

Last Updated 19 ಆಗಸ್ಟ್ 2021, 15:14 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸುಧಾರಿತ ಚಾಫ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಭಾರತೀಯ ವಾಯುಪಡೆಯ (ಐಎಎಫ್‌) ಯುದ್ಧ ವಿಮಾನಗಳನ್ನು ಶತ್ರುಗಳ ರಾಡಾರ್ ಮಾರ್ಗದರ್ಶಿತ ಕ್ಷಿಪಣಿಗಳಿಂದ ರಕ್ಷಿಸಲು ಇದನ್ನು ಬಳಸಲಾಗುತ್ತದೆ.

ಯಶಸ್ವಿ ಪ್ರಯೋಗಗಳ ಬಳಿಕ ಐಎಎಫ್ ಈ ತಂತ್ರಜ್ಞಾನವನ್ನು ಅಳವಡಿಸುವ ಪ್ರಕ್ರಿಯೆ ಆರಂಭಿಸಿದೆ ಎಂದು ಡಿಆರ್‌ಡಿಒ ಹೇಳಿಕೆಯಲ್ಲಿ ತಿಳಿಸಿದೆ.

ಡಿಆರ್‌ಡಿಒ ಕಾರ್ಯವನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘಿಸಿದ್ದಾರೆ. ಈ ಮಹತ್ವದ ತಂತ್ರಜ್ಞಾನವನ್ನು ಸ್ಥಳೀಯವಾಗಿ ಅಭಿವೃದ್ದಿ ಪಡಿಸುವ ಮೂಲಕ ಡಿಆರ್‌ಡಿಒ ಆತ್ಮನಿರ್ಭರದೆಡೆ ಮತ್ತೊಂದು ಹೆಜ್ಜೆ ಇರಿಸಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT