ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಸರ್‌ ನಿರ್ದೇಶಿತ ಟ್ಯಾಂಕ್ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 23 ಸೆಪ್ಟೆಂಬರ್ 2020, 11:52 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣೆ ಮತ್ತು ಸಂಶೋಧನೆ ಅಭಿವೃದ್ಧಿ ಸಂಸ್ಥೆ ದೇಶೀಯವಾಗಿ ಅಭಿವೃದ್ಧಿಪಡಿಸಿರುವಲೇಸರ್‌ ನಿರ್ದೇಶಿತ ಟ್ಯಾಂಕ್ ನಿರೋಧಕ ಕ್ಷಿಪಣಿಯನ್ನುಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿರುವ ಶಸ್ತ್ರಾಸ್ತ್ರ ಬಳಕೆ ತರಬೇತಿ ಕೇಂದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು.

ಶತ್ರುಪಡೆಯ ಟ್ಯಾಂಕ್‌ಗಳನ್ನುನಾಲ್ಕು ಕಿ.ಮೀ. ದೂರದಿಂದಲೇ ಗುರುತಿಸಿ, ಲೇಸರ್‌ ನಿರ್ದೇಶಿತ ಗುರಿ ಹಿಡಿದು, ಈ ಕ್ಷಿಪಣಿಯನ್ನು ಪ್ರಯೋಗಿಸಬಹುದಾಗಿದೆ.ಅಹಮದ್‌ನಗರದ ಆರ್ಮೌರ್ಡ್ ಕಾರ್ಪ್ಸ್‌ ಸೆಂಟರ್ ಅಂಡ್ ಸ್ಕೂಲ್ (ಎಸಿಸಿ ಅಂಡ್‌ ಎಸ್‌)ನ ಕೆ.ಕೆ ರೇಂಜ್‌ನಲ್ಲಿ ಎಂಬಿಟಿ ಅರ್ಜುನ್ ಟ್ಯಾಂಕ್‌ನಿಂದ ಪರೀಕ್ಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕ್ಷಿಪಣಿಯು ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿನ ಭಾರತೀಯ ಸೇನೆಯ ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಈ ಕ್ಷಿಪಣಿ ನಿಗದಿಪಡಿಸಿದ ಗುರಿಯನ್ನು ನಿಖರವಾಗಿ ತಲುಪುವಂತಹ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಿಪಣಿಯ ಪರೀಕ್ಷೆ ಯಶಸ್ವಿಗೊಳಿಸಿದ ಡಿಆರ್‌ಡಿಒ ತಂಡವನ್ನುಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT