ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಡಿಆರ್‌ಡಿಒದಿಂದ 500 ಹಾಸಿಗೆಗಳ ಎರಡು ಆಸ್ಪತ್ರೆ ನಿರ್ಮಾಣ

Last Updated 28 ಏಪ್ರಿಲ್ 2021, 14:31 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು, ಕಾಶ್ಮೀರದಲ್ಲಿ 500 ಹಾಸಿಗೆಗಳ ಎರಡು ಕೋವಿಡ್‌ ಆಸ್ಪತ್ರೆಗಳನ್ನು ಸ್ಥಾಪಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮುಂದಾಗಿದೆ.

ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

‘ಪ್ರಸ್ತುತ ಲಭ್ಯವಿರುವ ಆರೋಗ್ಯ ಸೌಲಭ್ಯಗಳ ಮೂಲಕ ರೋಗಿಗಳ ಅಗತ್ಯಗಳನ್ನು ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿದೆ. ಆದರೂ, ಕೋವಿಡ್‌ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಯಾಗುತ್ತಲೇ ಇರುವುದರಿಂದ ಹಾಸಿಗೆಗಳ ಕೊರತೆ ಎದುರಾಗಬಹುದು’ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಬಿ.ವಿ. ಆರ್ ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

‘ವೈದ್ಯಕೀಯ ಸೌಲಭ್ಯಗಳಲ್ಲಿನ ಕೊರತೆಯನ್ನು ಯಶಸ್ವಿಯಾಗಿ ನಿಭಾಯಿಸಲು, ತಾತ್ಕಾಲಿಕವಾಗಿ ಡಿಆರ್‌ಡಿಒ ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸಬೇಕು. ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ ಮತ್ತು ಸಂಪೂರ್ಣ ಸುಸಜ್ಜಿತವಾದ 125 ಐಸಿಯು ಹಾಸಿಗೆಗಳು ಇರಬೇಕು’ ಎಂದು ಅವರು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT