ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತಳೆ ಹಣ್ಣು ಸಾಗಿಸುತ್ತಿದ್ದ ವಾಹನ ತಪಾಸಣೆ ವೇಳೆ ₹1,476 ಕೋಟಿಯ ಡ್ರಗ್ಸ್ ವಶ

Last Updated 2 ಅಕ್ಟೋಬರ್ 2022, 12:26 IST
ಅಕ್ಷರ ಗಾತ್ರ

ನವದೆಹಲಿ : ‘ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು 198 ಕೆ.ಜಿ.ಕ್ರಿಸ್ಟಲ್‌ ಮೆಟಾಂಪೆಟಮೈನ್‌ ಮತ್ತು 9 ಕೆ.ಜಿ ಕೊಕೇನ್‌ ಜಪ್ತಿ ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹1,476 ಕೋಟಿ’ ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ.

‘ಮುಂಬೈನ ಡಿಆರ್‌ಐ ಅಧಿಕಾರಿಗಳು ವಾಸಿ ಪ್ರದೇಶದ ಬಳಿ ಕಿತ್ತಳೆ ಹಣ್ಣುಗಳನ್ನು ಸಾಗಿಸುತ್ತಿದ್ದ ಟ್ರಕ್‌ವೊಂದನ್ನು ತಡೆದು ತಪಾಸಣೆ ನಡೆಸಿದ್ದರು. ಕಿತ್ತಳೆ ಹಣ್ಣುಗಳಿದ್ದ ಪೆಟ್ಟಿಗೆಗಳನ್ನು ಪರಿಶೀಲಿಸಿದ್ದಾಗ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತು ಪತ್ತೆಯಾಗಿತ್ತು. ಇದನ್ನು ದಕ್ಷಿಣ ಆಫ್ರಿಕಾದಿಂದ ತರಲಾಗಿತ್ತು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ’ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT