ಬುಧವಾರ, ಮಾರ್ಚ್ 29, 2023
25 °C

ಅಮೃತಸರ: ಮಾದಕವಸ್ತು ಸಾಗಿಸುತ್ತಿದ್ದ ಡ್ರೋನ್‌ ಹೊಡೆದುರುಳಿಸಿದ ಯೋಧರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಢ: ಅಮೃತಸರದ ಭಾರತ–ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತು ಸಾಗಿಸುತ್ತಿದ್ದ ಡ್ರೋನ್‌ ಅನ್ನು ಯೋಧರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಬಿಎಸ್‌ಎಫ್‌ ಯೋಧರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಂಜಾಬ್‌ನ ಅಮೃತಸರ ಜಿಲ್ಲೆಯ ಕಕ್ಕರ್‌ ಗ್ರಾಮದಲ್ಲಿ ಡ್ರೋನ್‌ ಅನ್ನು ಗುಂಡು ಹಾರಿಸಿ ಹೊಡೆದುರುಳಿಸಿದ್ದು, ಅದರಲ್ಲಿ ಸಾಗಿಸುತ್ತಿದ್ದ ಐದು ಕೆ.ಜಿ. ಹೆರಾಯಿನ್‌ ವಶಪಡಿಸಿಕೊಳ್ಳಲಾಗಿದೆ’ ಎಂದು ವಿವರಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಹೇಳಿದ್ದಾರೆ.

‘ಡ್ರೋನ್‌ನಲ್ಲಿ ಅಮೆರಿಕ ಮತ್ತು ಚೀನಾ ನಿರ್ಮಿತ ಬಿಡಿಭಾಗಗಳು ಪತ್ತೆಯಾಗಿವೆ’ ಎಂದು ಡಿಜಿಪಿ ಗೌರವ್‌ ಯಾದವ್‌ ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು