ಮಂಗಳವಾರ, ಡಿಸೆಂಬರ್ 1, 2020
18 °C

ಪೂಂಚ್‌: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಡ್ರೋನ್‌ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮೆಂಧರ್ ವಲಯದ ಗಡಿ ನಿಯಂತ್ರಣ ರೇಖೆ ಬಳಿಯೂ ಪಾಕಿಸ್ತಾನಿ ಡ್ರೋನ್‌ ಹಾರಾಡುತ್ತಿರುವುದು ಪತ್ತೆಯಾಗಿದ್ದು, ತಕ್ಷಣವೇ ಡ್ರೋನ್‌ ಪತ್ತೆಗಾಗಿ ಶೋಧ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಗಡಿ ನಿಯಂತ್ರಣ ರೇಖೆಯ ಬಳಿ ಶನಿವಾರ ಸಂಜೆ  ಡ್ರೋನ್‌ ಹಾರಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ಬಾಸೋನಿ, ಧರಣಾ ಮತ್ತು ಪಕ್ಕದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಳೆದ ಆರು ತಿಂಗಳಲ್ಲಿ ಎಲ್‌ಓಸಿ ಮತ್ತು ಅಂತರರಾಷ್ಟ್ರೀಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಡ್ರೋನ್‌ ಹಾರಾಟಗಳು ಹೆಚ್ಚಾಗಿವೆ. ಡ್ರೋನ್‌ ಮೂಲಕ ಪಾಕ್‌ ಗಡಿಯಿಂದಾಚೆಗೆ ಮಾದಕ ವಸ್ತು, ಶಸ್ತ್ರಾಸ್ತ್ರಗಳನ್ನು ರವಾನೆ ಮಾಡುತ್ತಿದೆ ಎಂದು ಅಧಿಕಾರಿಗಳು ದೂರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು