ಸೋಮವಾರ, ಆಗಸ್ಟ್ 15, 2022
26 °C

ಶ್ರೀಶೈಲ ದೇವಸ್ಥಾನ ಆವರಣದಲ್ಲಿ ಡ್ರೋನ್‌ ಹಾರಾಟ: ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಆಂಧ್ರಪ್ರದೇಶದ ಶ್ರೀಶೈಲದಲ್ಲಿ ದೇವಸ್ಥಾನಗಳಿರುವ ಪ್ರದೇಶದಲ್ಲಿ ರಾತ್ರಿ ವೇಳೆ ಡ್ರೋನ್‌ಗಳ ಹಾರಾಟ ನಡೆದಿದೆ. ಈ ಪ್ರದೇಶ ಕುರಿತು ಸಮೀಕ್ಷೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಶ್ರೀಶೈಲದಲ್ಲಿ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಇದೆ. ತಿರುಪತಿ ನಂತರ ಈ ಕ್ಷೇತ್ರ ಹೆಚ್ಚು ಪ್ರಸಿದ್ಧವಾಗಿದ್ದು, ವಿಶೇಷವಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಪ್ರತಿ ವರ್ಷ ಲಕ್ಷಾಂತರ ಜನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.

‘ಕಳೆದ ಕೆಲ ದಿನಗಳಿಂದ ಡ್ರೋನ್‌ಗಳ ಹಾರಾಟ ನಡೆದಿರುವ ದೂರುಗಳಿವೆ. ಈ ಸಂಬಂಧ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಯಾವ ಉದ್ದೇಶಕ್ಕೆ ಹಾಗೂ ಯಾರು ಈ ಡ್ರೋನ್‌ಗಳ ಹಾರಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಕೈಗೊಂಡಿದ್ದೇವೆ’ ಎಂದು ಕರ್ನೂಲು ಜಿಲ್ಲೆಯ ಆತ್ಮಕೂರು ಡಿಎಸ್‌ಪಿ ಶ್ರುತಿ ಯೆರ‍್ರಗುಂಟ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು