ಜಮ್ಮು ಡ್ರೋನ್ ದಾಳಿ: ಶ್ರೀನಗರದಲ್ಲಿ ಚಾಲಕ ರಹಿತ ವಿಮಾನಗಳಿಗೆ ನಿಷೇಧ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಡ್ರೋನ್, ಚಾಲಕ ರಹಿತ ವಿಮಾನ ಹೊಂದುವುದು, ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದೆ. ವಾರದ ಹಿಂದೆ ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿಯಿಂದ ಇಬ್ಬರು ವಾಯಪಡೆಯ ಸಿಬ್ಬಂದಿ ಗಾಯಗೊಂಡ ನಂತರ ಈ ಬೆಳವಣಿಗೆ ನಡೆದಿದೆ.
ವೈಮಾನಿಕ ಪ್ರದೇಶ ಮತ್ತು ಹೆಚ್ಚು ಜನರಿರುವ ಪ್ರದೇಶಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಡ್ರೋನ್‌ನಂತಹ ಹಾರಾಟದ ವಾಹನಗಳನ್ನು ನಿರ್ಬಂಧಿಸಲಾಗಿದೆ. ಸಭೆ, ಸಮಾರಂಭಗಳಲ್ಲಿ ಯಾವುದೇ ದುರ್ಘಟನೆಗಳು ಸಂಭವಿಸದಂತೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶ್ರೀನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೊಹಮ್ಮದ್ ಐಜಾಜ್ ಹೇಳಿದ್ದಾರೆ.
ಡ್ರೋನ್ ಕ್ಯಾಮರಾಗಳು ಸೇರಿದಂತೆ ಚಾಲಕ ರಹಿತ ವಿಮಾನಗಳನ್ನು ಹೊಂದಿರುವವರು ಸ್ಥಳೀಯ ಪೊಲೀಸ್ ಠಾಣೆಗೆ ತಂದು ಒಪ್ಪಿಸಬೇಕು ಎಂದು ಐಜಾಜ್ ಸೂಚನೆ ನೀಡಿದ್ದಾರೆ. ಆದರೆ ಸರ್ಕಾರದ ಸೇವೆಯಲ್ಲಿರುವ ನಕ್ಷೆ ಸೂಚಕ, ಕೃಷಿ ಸಮೀಕ್ಷೆ, ಹವಾಮಾನ ಸಮೀಕ್ಷೆ ಮತ್ತಿತರ ಕೆಲಸಗಳಿಗೆ ಬಳಕೆ ಮಾಡುವ ಡ್ರೋನ್‌ಗಳಿಗೆ ನಿರ್ಬಂಧವಿಲ್ಲ ಎಂದು ಜಿಲ್ಲಾಡಳಿತ ಸೂಚಿಸಿದೆ.
ಜಮ್ಮು ದಾಳಿಯ ನಂತರ ರಜೌರಿ, ಕಥುವಾ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಆಡಳಿತವು ಡ್ರೋನ್‌ಗಳ ಮೇಲೆ ನಿಷೇಧ ಹೇರಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಎರಡು ಡ್ರೋನ್ ಪತ್ತೆ: ಸೇನೆಯಿಂದ ಗುಂಡಿನ ದಾಳಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.