ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇದಾರನಾಥ ಬಳಿ ಹೆಲಿಕಾಪ್ಟರ್ ದುರಂತ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂತಾಪ

Last Updated 18 ಅಕ್ಟೋಬರ್ 2022, 9:09 IST
ಅಕ್ಷರ ಗಾತ್ರ

ಕೇದಾರನಾಥ (ಉತ್ತರಾಖಂಡ): ಕೇದಾರನಾಥ ದೇವಾಲಯದಿಂದ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಪೈಲೆಟ್‌ ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಕೇದಾರನಾಥ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಯಾತ್ರಾರ್ಥಿಗಳು ಮೃತಪಟ್ಟಿರುವ ಸಂಗತಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತ ಅತೀವ ದುಃಖಕರವಾಗಿದೆ. ಕುಟುಂಬದವರ ದುಃಖದಲ್ಲಿನಾನು ಭಾಗಿಯಾಗುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಟ್ವೀಟ್ ಮಾಡಿದೆ.

ದುರಂತ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ್ದು, ಆರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಹೆಲಿಕಾಪ್ಟರ್‌ನಲ್ಲಿ ಒಟ್ಟು 7 ಜನ ಇದ್ದರು.

ಈ ದುರ್ಘಟನೆ ಕೇದಾರನಾಥದಿಂದ ಅಣತಿ ದೂರದಲ್ಲಿರುವ ಫಾಟಾದಲ್ಲಿ ನಡೆದಿದೆ. ಮೃತರ ಗುರುತು ಪತ್ತೆಗೆ ಶ್ರಮಿಸಲಾಗುತ್ತಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ತೆರಳಿದೆ ಎಂದು ಉತ್ತರಾಖಂಡ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಹೆಲಿಕಾಪ್ಟರ್ ಕೇದಾರನಾಥದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹವಾಮಾನ ವೈಪರಿತ್ಯದಿಂದ ಅಪಘಾತಕ್ಕೆ ಈಡಾಗಿದೆ ಎಂದು ವರದಿ ತಿಳಿಸಿದೆ. ಹೆಲಿಕಾಪ್ಟರ್ ಡೆಹರಾಡೂನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ.

ಘಟನೆ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT