ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಜನ್ಮದಿನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ

Last Updated 25 ಡಿಸೆಂಬರ್ 2022, 7:35 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ದಿನೋತ್ಸವದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಸದೈವ್ ಅಟಲ್’ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಕುರಿತಾದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮೋದಿ, ‘ಅಟಲ್ ಜೀ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ದೂರದೃಷ್ಟಿಯ ನಾಯಕತ್ವ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

‘ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಲ್ಲಿ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಅಡಿಪಾಯ ಹಾಕಿದರು. ತಮ್ಮ ನಾಯಕತ್ವದಲ್ಲಿ ಭಾರತದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವುದರ ಜತೆಗೆ ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ತುಂಬಿದರು. ಇಂದು ಅಟಲ್ ಜೀ ಅವರ ಜನ್ಮದಿನದಂದು ಅವರಿಗೆ ನಮನಗಳು’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

‘ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಸಂಸದೀಯಪಟು, ಕವಿ, ವಾಗ್ಮಿ, ಅಜಾತಶತ್ರು, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಪೂರ್ವಕ ನಮನಗಳು. ಅವರ ಜನ್ಮದಿನವನ್ನು ‘ಉತ್ತಮ ಆಡಳಿತ ದಿನ’ ಎಂದು ಆಚರಿಸಲಾಗುತ್ತದೆ. ಅವರ ಸರಳತೆ, ವ್ಯಕ್ತಿತ್ವ ನಾಯಕತ್ವ ಗುಣಗಳು ಎಲ್ಲರಿಗೂ ಆದರ್ಶಪ್ರಾಯವಾಗಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿ. 25ರಂದು ‘ಉತ್ತಮ ಆಡಳಿತ ದಿನ’ ಎಂದು ಪ್ರತಿವರ್ಷ ಆಚರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT