ಗುರುವಾರ , ಆಗಸ್ಟ್ 11, 2022
23 °C

ಡ್ರಗ್ಸ್‌ ಪ್ರಕರಣ: ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ ಕೋರ್ಟ್’ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕನ್ನಡ ಚಿತ್ರನಟಿ ರಾಗಿಣಿ ದ್ವಿವೇದಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ರಾಜ್ಯ ಸರ್ಕಾರಕ್ಕೆ ಶುಕ್ರವಾರ ನೋಟಿಸ್‌ ನೀಡಿದೆ.

ಡ್ರಗ್ಸ್‌ ಪೂರೈಕೆ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ರಾಗಿಣಿಗೆ ಜಾಮೀನು ನೀಡಲು ರಾಜ್ಯ ಹೈಕೋರ್ಟ್‌ ನಿರಾಕರಿಸಿತ್ತು. ಹೈಕೋರ್ಟ್‌ನ ನವೆಂಬರ್‌ 3ರ‌ ಆದೇಶವನ್ನು ಪ್ರಶ್ನಿಸಿ ರಾಗಿಣಿ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್‌.ಎಫ್‌. ನಾರಿಮನ್‌, ನವೀನ್‌ ಸಿನ್ಹಾ ಮತ್ತು ಕೆ.ಎಂ.ಜೋಸೆಫ್‌ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಹಿರಿಯ ವಕೀಲ ಸಿದ್ದಾರ್ಥ್‌ ಲೂಥ್ರಾ ಅವರು ರಾಗಿಣಿ ಪರ ವಾದಿಸಿದರು.

ನಿಷೇಧಿತ ಮಾದಕ ವಸ್ತುಗಳ ಪೂರೈಕೆ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಸಿಸಿಬಿ ಪೊಲೀಸರು ಸೆಪ್ಟೆಂಬರ್‌ 4ರಂದು ಬೆಂಗಳೂರಿನಲ್ಲಿ ರಾಗಿಣಿಯನ್ನು ಬಂಧಿಸಿದ್ದರು.    

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು