ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ,ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್ ಮತ್ತು ಇತರ 7 ಮಂದಿಗೆ ಮುಂಬೈ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಶುಕ್ರವಾರ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯ ನಿಯಂತ್ರಣಾ ವಿಭಾಗವು (ಎನ್‌ಸಿಬಿ) ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿತ್ತು. ಆದರೆ ಎನ್‌ಸಿಬಿಯ ವಿನಂತಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.
ಅಕ್ಟೋಬರ್ 3 ರಂದು ಮುಂಬೈ ಕಡಲ ತೀರದಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ತಂಡ, ಶಾರುಖ್ ಮಗ ಆರ್ಯನ್ ಖಾನ್, ಮುನ್ಮುನ್ ಧಮೆಚಾ ಮತ್ತು ಅರ್ಬಾಜ್ ಎಂಬುವವರನ್ನು ಬಂಧಿಸಿತ್ತು. ನಂತರ ಇತರ 5 ಮಂದಿಯನ್ನು ಸೆರೆ ಹಿಡಿದಿತ್ತು.
ಈ ಹಿಂದೆ ನ್ಯಾಯಾಲಯವು ಆರೋಪಿಗಳನ್ನು ಅ. 7ರ ವರೆಗೆ ಎನ್‌ಸಿಬಿ ವಶಕ್ಕೆ ನೀಡಿತ್ತು. ಈ ಅವಧಿಯನ್ನು ವಿಸ್ತರಿಸುಂತೆ ಎನ್‌ಸಿಬಿ ಅಧಿಕಾರಿಗಳು ಕೋರಿದ್ದರು. ಆದರೆ, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.