ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ಇ.ಡಿ ಎದುರು ವಿಚಾರಣೆಗೆ ಹಾಜರಾದ ನಟಿ ರಕುಲ್ ಪ್ರೀತ್ ಸಿಂಗ್

Last Updated 3 ಸೆಪ್ಟೆಂಬರ್ 2021, 6:41 IST
ಅಕ್ಷರ ಗಾತ್ರ

ಹೈದರಾಬಾದ್‌: ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿ ದಂತೆ ನಟಿ ರಕುಲ್‌ ಪ್ರೀತ್ ಸಿಂಗ್‌ ಶುಕ್ರವಾರ ಜಾರಿ ನಿರ್ದೇಶನಾಲಯ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು.

ನಾಲ್ಕು ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಸೇರಿ ತೆಲುಗು ಚಿತ್ರೋದ್ಯಮದ ಹತ್ತು ಮಂದಿ ನಟ ನಟಿಯರಿಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿತ್ತು.

ತೆಲಂಗಾಣ ಸರ್ಕಾರದ ಅಬ್ಕಾರಿ ಇಲಾಖೆ ನಿಷೇಧಿಸಿರುವ ಎಲ್‌ಎಸ್‌ಡಿ ಮತ್ತು ಎಂಡಿಎಂನಂತಹ ಅತ್ಯಾಧುನಿಕ ಮಾದಕ ದ್ರವ್ಯಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ನಟ –ನಟಿಯರಿಗೆ ನೋಟಿಸ್ ಜಾರಿ ಮಾಡಲಾಗಿತ್ತು

ಈ ಪ್ರಕರಣದಲ್ಲಿಈಗಾಗಲೇ ತೆಲುಗು ಸಿನಿಮಾದ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ನಟಿ ಚಾರ್ಮಿ ಕೌರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT