ಡ್ರಗ್ಸ್ ಪ್ರಕರಣ: ಆದಿತ್ಯ ಆಳ್ವ ಜಾಮೀನು ಅರ್ಜಿ ಪುರಸ್ಕರಿಸದ ಸುಪ್ರೀಂ ಕೋರ್ಟ್

ನವದೆಹಲಿ: ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಹೈಕೋರ್ಟ್ ಮೊರೆ ಹೋಗುವಂತೆ ನ್ಯಾಯಮೂರ್ತಿಗಳಾದ ಆರ್.ಎಫ್. ನರಿಮನ್ ಮತ್ತು ನವೀನ್ ಸಿನ್ಹಾ ಅವರ ಪೀಠ ಸೂಚಿಸಿದೆ.
ಬಂಧಿಸದಂತೆ ಜಾಮೀನು ಹಾಗೂ ಪ್ರಕರಣ ವಜಾಗೊಳಿಸುವಂತೆ ಕೋರಿ ಆಳ್ವ ಪರವಾಗಿ ಅವರ ವಕೀಲ ನಿಶಾಂತ್ ಪಾಟೀಲ್ ಅರ್ಜಿ ಸಲ್ಲಿಸಿದ್ದರು.
ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಅವರು ಡ್ರಗ್ಸ್ ಪ್ರಕರಣದಲ್ಲಿ ಹೆಸರು ಕೇಳಿಬಂದ ಬಳಿಕ ತಲೆಮರೆಸಿಕೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.