ಡ್ರಗ್ಸ್ ಪ್ರಕರಣ: ದಾವೂದ್ ಇಬ್ರಾಹಿಂ ಸಹಚರ ಪರ್ವೇಜ್ ಖಾನ್ ಬಂಧನ

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.
ಕಳೆದ ತಿಂಗಳು ಇದೇ ಪ್ರಕರಣ ಸಂಬಂಧ ಪಠಾಣ್ ಸಂಬಂಧಿಕ ಡಾನ್ ಕರೀಂ ಲಾಲಾ ಎಂಬಾತನನ್ನು ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್‌ಸಿಬಿ) ಅಧಿಕಾರಿಗಳು ನವಿ ಮುಂಬೈನಲ್ಲಿ ಬಂಧಿಸಿದ್ದರು.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಡ್ರಗ್ಸ್ ಪ್ರಕರಣದಡಿ ಸೋಹಿಲ್ ಸಯ್ಯದ್ ಮತ್ತು ಝಿಶಾನ್ ಎಂಬವರನ್ನು ಬಂಧಿಸಲಾಗಿತ್ತು. ಈ ವೇಳೆ ಚಿಂಕು ಪಠಾಣ್ ಕೂಡ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ವಿಷಯ ತಿಳಿದುಬಂದಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದರು.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಬಂಧನದಲ್ಲಿದ್ದ ಪಠಾಣ್‌ನನ್ನು ಶನಿವಾರ ಎಟಿಎಸ್ ವಶಕ್ಕೆ ಪಡೆದುಕೊಂಡಿದೆ. ಅದೇ ದಿನ ಎಟಿಸಿ ಆತನನ್ನು ಮುಂಬೈ ನ್ಯಾಯಾಲಕ್ಕೆ ಹಾಜರುಪಡಿಸಿತ್ತು.ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರುವರಿ 10 ತನಕ, ಪಠಾಣ್‌ನನ್ನು ಎಟಿಎಸ್ ಕಸ್ಟಡಿಗೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.