ಮಂಗಳವಾರ, ಅಕ್ಟೋಬರ್ 27, 2020
19 °C

ಡ್ರಗ್ಸ್‌ ಪ್ರಕರಣ: ದೀಪಿಕಾಗೆ ಸಮನ್ಸ್‌ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಎನಿಸಿದರೆ ನಟಿ ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌ ನೀಡಲಾಗುತ್ತದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

ದೀಪಿಕಾ ಹಾಗೂ ಅವರ ಮ್ಯಾನೇಜರ್‌ ಕರೀಷ್ಮಾ ನಡುವಿನ ವಾಟ್ಸ್‌ಆ್ಯಪ್‌‌ ಸಂಭಾಷಣೆಗೆ ಸಂಬಂಧಿಸಿ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎನ್‌ಸಿಬಿ ಮೂಲಗಳು ತಿಳಿಸಿವೆ.

ಕರೀಷ್ಮಾ ಪ್ರಕಾಶ್‌ ಮತ್ತು ಕ್ವಾನ್‌ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್ ಸಿಇಒ‌ ಧುರ್ವ್‌ ಚಿಟ್‌ಗೋಪೇಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಮನ್ಸ್‌ ನೀಡಲಾಗಿದೆ. 

ನಟಿಯರಾದ ರಾಕುಲ್‌ ಪ್ರೀತ್‌ ಸಿಂಗ್‌, ಸಾರಾ ಅಲಿ ಖಾನ್‌ ಮತ್ತು ಫ್ಯಾಷನ್ ಡಿಸೈನರ್ ಸಿಮನ್ ಖಾಂಭಟ್ಟ ಅವರಿಗೂ ಈ ವಾರ ನೋಟಿಸ್‌ ನೀಡಲಾಗುವುದು ಎನ್‌ಸಿಬಿ ಮಾಹಿತಿ ನೀಡಿದೆ.

ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋವಿಕ್‌ ಸೇರಿದಂತೆ 12 ಮಂದಿಯನ್ನು ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು