ಗುರುವಾರ , ಆಗಸ್ಟ್ 11, 2022
23 °C

ಕಾಶ್ಮೀರ: ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ, ನಾಲ್ವರ ಬಂಧನ

ಜುಲ್ಫೀಕರ್‌ ಮಜೀದ್‌ Updated:

ಅಕ್ಷರ ಗಾತ್ರ : | |

Drugs

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 6 ಕೆಜಿ ಕೊಕೇನ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು ನಾಲ್ಕು ಮಂದಿಯನ್ನು  ಬಂಧಿಸಿದ್ದಾರೆ.

ಶುಕ್ರವಾರ ಬಾರಾಮುಲ್ಲಾ ಜಿಲ್ಲೆಯ ಓಲ್ಡ್ ಟೌನ್‌ನಿಂದ ಇವರನ್ನು ಬಂಧಿಸಿದ್ದು ಇವರ ಬಳಿಯಿಂದ  6 ಪ್ಯಾಕೆಟ್ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ವಸ್ತು ಕೊಕೇನ್‌ನಂತಿದ್ದು ಸುಮಾರು 6 ಕೆಜಿ ತೂಕವಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೆಕ್ಷನ್ 8/21-29 ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜೂನ್ ತಿಂಗಳಲ್ಲಿ ಪೊಲೀಸರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದು ಅವರಿಂದ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದರು. ಸೆಪ್ಟೆಂಬರ್ 14ರಂದು ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ 35 ಕೋಟಿ  ಮೌಲ್ಯದ 7 ಕೆಜೆ ಹೆರಾಯಿನ್ ಪತ್ತೆಯಾಗಿದ್ದು, ಒಬ್ಬ ವ್ಯಕ್ತಿಯನ್ನು  ಬಂಧಿಸಿದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು