ಶನಿವಾರ, ಸೆಪ್ಟೆಂಬರ್ 26, 2020
27 °C

ನವಿ ಮುಂಬೈನ ಬಂದರಿನಲ್ಲಿ ₹1000 ಕೋಟಿ ಮೌಲ್ಯದ ಮಾದಕ ವಸ್ತು ವಶ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ₹1000 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನವಿ ಮುಂಬೈನ ಜವಾಹರಲಾಲ್‌ ನೆಹರು ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ. 

ಕಸ್ಟಮ್ಸ್‌ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ₹1000 ಕೋಟಿ ಬೆಲೆಯ 191 ಕೆಜಿ ತೂಕದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಕಂದಾಯ ಗುಪ್ತಚರ ನಿರ್ದೇಶನಾಲಯ ಸ್ಪಷ್ಟಪಡಿಸಿದೆ. 

ಈ ಬಗ್ಗೆ ಹೇಳಿಕೆ ನೀಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ,'ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ನವಿ ಮುಂಬೈನ ಜವಾಹರಲಾಲ್‌ ನೆಹರು ಬಂದರಿನಲ್ಲಿ ₹1000 ಕೋಟಿ ಮೌಲ್ಯದ 191 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಕೊಳವೆಗಳ ಮೂಲಕ ಸಾಗಿಸಲಾಗಿದೆ. ಮಾದಕ ವಸ್ತುಗಳು ಅಫ್ಘಾನಿಸ್ತಾನದಿಂದ ಬಂದಿರುವುದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಲಾಗಿದೆ' ಎಂದು ಮಾಹಿತಿ ನೀಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು