ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂನಲ್ಲಿ ₹10 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ

Last Updated 10 ಜುಲೈ 2022, 9:38 IST
ಅಕ್ಷರ ಗಾತ್ರ

ರಂಗಿಯಾ (ಅಸ್ಸಾಂ): ಅಸ್ಸಾಂನ ಕಮ್ರೂಪ್ ಜಿಲ್ಲೆಯಲ್ಲಿ ಐದು ಕೆಜಿ ಅಫೀಮು ಸೇರಿದಂತೆ ₹10 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೋರ್ಕಾದಲ್ಲಿ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸ್ ವರಿಷ್ಠ ಹಿತೇಶ್ ಚಂದ್ರ ರಾಯ್ ಮಾಹಿತಿ ನೀಡಿದ್ದಾರೆ.

‘ಆನ್ ಟೆಲಿಕಾಂ ಡ್ಯೂಟಿ’ ಎಂಬ ಸ್ಟಿಕ್ಕರ್‌ನೊಂದಿಗೆ ಮಿನಿ ಟ್ರಕ್‌ನಲ್ಲಿ ಡ್ರಗ್ಸ್ ಸಾಗಿಸಲಾಗುತ್ತಿತ್ತು. ವಾಹನದ ಮ್ಯೂಸಿಕ್ ಸಿಸ್ಟಂ ಮತ್ತು ಸ್ಪೇರ್ ಟಾಯರ್‌ನಲ್ಲಿ ಡ್ರಗ್ಸ್‌ ಅನ್ನು ಬಚ್ಚಿಡಲಾಗಿತ್ತು ಎಂದು ರಾಯ್ ಹೇಳಿದ್ದಾರೆ.

ವಾಹನದಲ್ಲಿದ್ದ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಅವರನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT