ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಉತ್ತರ ಪ್ರದೇಶ ವಾಹನದಲ್ಲಿದ್ದ ₹ 15 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

Last Updated 29 ಅಕ್ಟೋಬರ್ 2022, 9:05 IST
ಅಕ್ಷರ ಗಾತ್ರ

ದಿಫು (ಅಸ್ಸಾಂ): ಕರ್ಬಿ ಅಂಗ್‌ಲಾಂಗ್‌ ಜಿಲ್ಲೆಯಲ್ಲಿ ಸುಮಾರು ₹ 15 ಕೋಟಿ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಇಲ್ಲಿನ ದಿಲ್ಲಾಯ್‌ ಚೆಕ್‌ ಪೋಸ್ಟ್‌ ಬಳಿ ತಪಾಸಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ನೋಂದಣಿ ಸಂಖ್ಯೆ ಹೊಂದಿದ್ದ ಹಾಗೂ ಮಣಿಪುರ ಕಡೆಯಿಂದ ಬೆಳಗ್ಗೆ 11.30ಕ್ಕೆ ಬಂದವಾಹನವನ್ನು ತಪಾಸಣೆ ನಡೆಸಲಾಯಿತು.ಈ ವೇಳೆ ವಾಹನ ಹಿಂಬದಿಯಲ್ಲಿ ಅಡಗಿಸಿಟ್ಟಿದ್ದ ಸುಮಾರು 4 ಕೆ.ಜಿ.ಯಷ್ಟು ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಮಣಿಪುರದವರು ಎಂದು ತಿಳಿಸಿದ್ದಾರೆ.

ವಶಕ್ಕೆ ಪಡೆಯಲಾದ ಮಾದಕ ವಸ್ತುವಿನ ಬೆಲೆ ₹ 15 ಕೋಟಿ ಎಂದುಅಂದಾಜಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT