ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 425 ಕೋಟಿ ಮೌಲ್ಯದ ಮಾದಕವಸ್ತು ವಶ: ಇರಾನಿ ಪ್ರಜೆಗಳ ಬಂಧನ

Last Updated 7 ಮಾರ್ಚ್ 2023, 10:42 IST
ಅಕ್ಷರ ಗಾತ್ರ

ಅಹಮದಾಬಾದ್‌: ಸಮುದ್ರ ಮಾರ್ಗವಾಗಿ ₹ 425 ಕೋಟಿ ಮೌಲ್ಯದ ಮಾದಕವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇರಾನಿ ಪ್ರಜೆಗಳನ್ನು ಭಾರತೀಯ ಕರಾವಳಿ ಪಡೆ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ ಕರಾವಳಿಯ ಓಖಾದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಒಂದು ಹಡಗು ಹಾಗೂ 62 ಕೆ.ಜಿ ಮಾದಕವಸ್ತುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸದ್ಯ ಬಂಧಿತರನ್ನು ಓಖಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಕಳೆದ 18 ತಿಂಗಳಿಂದ ₹ 2,355 ಕೋಟಿ ಮೌಲ್ಯದ ಸುಮಾರ 500 ಕೆ.ಜಿ ಮಾದಕವಸ್ತುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT