ಲಖನೌ: ಅಕಾಲ್ ತಖ್ತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕೋಲ್ಕತ್ತಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಟ್ರಾವೆಲ್ ಟಿಕೆಟ್ ಎಕ್ಸಾಮಿನರೊಬ್ಬರು (ಟಿಟಿಇ) ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆ ತನ್ನ ಪತಿ ಜೊತೆ ಅಮೃತಸರದಿಂದ ಕೋಲ್ಕತ್ತಕ್ಕೆ ಪ್ರಯಾಣಿಸುತ್ತಿದ್ದರು. ಅಮೃತಸರದಿಂದ ಕೋಲ್ಕತ್ತಕ್ಕೆ ಹೋಗುತ್ತಿದ್ದ ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಧ್ಯರಾತ್ರಿ ಸುಮಾರಿಗೆ ಮಹಿಳೆ ತನ್ನ ಸೀಟ್‌ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಬಿಹಾರದ ಟಿಟಿಇ ಮುನ್ನಾ ಕುಮಾರ ಎಂಬಾತ ಕುಡಿದ ಅಮಲಿನಲ್ಲಿ ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವರದಿಯಾಗಿದೆ.
ಘಟನೆ ಬಳಿಕ ಪತ್ನಿ ಈ ಬಗ್ಗೆ ಎಚ್ಚರಿಸಿದಾಗ ಪತಿ ಹಾಗೂ ಇತರೆ ಪ್ರಯಾಣಿಕರು ಟಿಟಿಇಯನ್ನು ಹಿಡಿದುಕೊಂಡಿದ್ದಾರೆ. ಸೋಮವಾರ, ರೈಲು ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ರೈಲ್ವೆ ಪೊಲೀಸ್ (ಜಿಆರ್‌ಪಿ) ಟಿಟಿಇಯನ್ನು ಬಂಧಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.