ಶನಿವಾರ, ಜನವರಿ 23, 2021
28 °C

ದೆಹಲಿಯಲ್ಲಿ ಕೋವಿಡ್‌ ಲಸಿಕೆಯ ಪೂರ್ವಾಭ್ಯಾಸ ಪ್ರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಶನಿವಾರ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು (ಡ್ರೈ ರನ್‌) ಆರಂಭಿಸಲಾಗಿದ್ದು, ಇದಕ್ಕಾಗಿ ಮೂರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಶಹದಾರದಲ್ಲಿರುವ ಗುರು ತೇಜ್ ಬಹದ್ದೂರ್ ಆಸ್ಪತ್ರೆ, ದರಿಯಗಂಜ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದ್ವಾರಕದಲ್ಲಿರುವ ವೆಂಕಟೇಶ್ವರ ಆಸ್ಪತ್ರೆಯನ್ನು ಕೋವಿಡ್ ಲಸಿಕೆಯ ಪೂರ್ವಾಭ್ಯಾಸಕ್ಕಾಗಿ ಆಯ್ಕೆ ಮಾಡಲಾಗಿದೆ.

ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಕೋವಿಡ್‌ ಲಸಿಕೆ ಲಭ್ಯವಾಗುವವರೆಗೂ ಅಸ್ಸಾಂನಲ್ಲಿಯೂ ನಿಯಮಿತವಾಗಿ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ

‘ಲಸಿಕೆ ನಮಗೆ ಸಿಗುವುದಕ್ಕಿಂತ ಮುಂಚಿತವೇ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದ್ಧೇವೆ. ಜನರಿಗೆ ಲಸಿಕೆ ನೀಡುವಾಗ ಯಾವುದೇ ಕೊರತೆಗಳು ಉಂಟಾಗಬಾರದು’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್‌ನನಿರ್ದೇಶಕ  ಎಸ್‌. ಲಕ್ಷ್ಮಣನ್ ತಿಳಿಸಿದ್ದಾರೆ.

ದೇಶದಾದ್ಯಂತ ಜನವರಿ 2 ರಿಂದ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಯೋಜನೆ ಮತ್ತು ಅನುಷ್ಠಾನದ ನಡುವಿನ ಸಂಪರ್ಕ ಮತ್ತು ಸವಾಲುಗಳ ಬಗ್ಗೆ ತಿಳಿಯಲು ಈ ಪೂರ್ವಾಭ್ಯಾಸವನ್ನು ನಡೆಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು