ಭಾನುವಾರ, ಮೇ 9, 2021
18 °C

ದುಬೈಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಇಲ್ಲಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ಕಾರಣಗಳಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 172 ಪ್ರಯಾಣಿಕರು ಮತ್ತು ಏಳು ಮಂದಿ ಸಿಬ್ಬಂದಿ ಇದ್ದ ವಿಮಾನವು ಗುರುವಾರ ಸಂಜೆ ಇಲ್ಲಿಂದ ಹೊರಟ ಸ್ವಲ್ಪ ಸಮಯದ ಬಳಿಕ ವಾಪಸ್‌ ಬಂತು.

’ತಾಂತ್ರಿಕ ಸಮಸ್ಯೆಗಳ ಬಗ್ಗೆ ಪೈಲಟ್‌ ಅನುಮಾನ ವ್ಯಕ್ತಪಡಿಸಿದ ಕಾರಣ ವಿಮಾನವು ತುರ್ತು ಭೂ ಸ್ಪರ್ಶ ಮಾಡಿತು. ಅಗತ್ಯ ತಪಾಸಣೆಯ ನಂತರ ಮತ್ತೆ ದುಬೈಗೆ ಹೊರಟಿತು‘ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು