ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ‍್ಹಾನ್ ಅಲ್ ಸೌದ್ ಅವರೊಂದಿಗೆ ಭಾನುವಾರ ಸಭೆ ನಡೆಸಿದ್ದು, ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಿದ್ದಾರೆ.

ಇದೇ ವೇಳೆಗೆ ರಕ್ಷಣೆ, ವಾಣಿಜ್ಯ, ಹೂಡಿಕೆ ಹಾಗೂ ಇಂಧನ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ವಿಸ್ತರಿಸುವ ಬಗ್ಗೆಯೂ ಚರ್ಚಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ಪ್ರಕಟಣೆ ತಿಳಿಸಿದೆ. ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತೀಯರಿಗೆ ಸೌದಿ ಅರೇಬಿಯಾ ನೆರವಾಗಿದ್ದನ್ನು ಶ್ಲಾಘಿಸಿದ ಜೈಶಂಕರ್, ಭಾರತದಿಂದ ಗಲ್ಫ್ ದೇಶಗಳಿಗೆ ಪ್ರಯಾಣಿಸುವವರ ಮೇಲಿನ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವಂತೆ ಗ್ರಹಿಸಿದರು.

ಸೌದ್, ಭಾರತದಲ್ಲಿ ಮೂರು ದಿನಗಳ ಪ್ರವಾಸದಲ್ಲಿದ್ದು ಶನಿವಾರ ದೆಹಲಿಗೆ ಬಂದಿದ್ದಾರೆ. ಇಬ್ಬರೂ ಸಚಿವರು ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆಗಳು, ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದ ಚರ್ಚೆ ನಡೆಸಿದರು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.