ಬುಧವಾರ, ಮಾರ್ಚ್ 29, 2023
24 °C

ಭಾರತೀಯ ಶಾಂತಿ ಪಾಲಕರ ಕಾರ್ಯಕ್ಕೆ ಜೈಶಂಕರ್‌ ಶ್ಲಾಘನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾರ್ನಾಕಾ (ಸೈಪ್ರಸ್): ವಿಶ್ವಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಶಾಂತಿಪಾಲಕರ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಶನಿವಾರ ಶ್ಲಾಘಿಸಿದರು.

ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಹೆಸರಿಟ್ಟಿರುವ ಸೈಪ್ರಸ್‌ನ ಬೀದಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತದ ಶಾಂತಿಪಾಲಕರ ಕೆಲಸವು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದೂ ಹೇಳಿದ್ದಾರೆ.

ಸೈಪ್ರಸ್‌ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತದ ಶಾಂತಿಪಾಲಕರು ನೀಡಿರುವ ಗಣನೀಯ ಕೊಡುಗೆಯನ್ನು ಅಲ್ಲಿನ ವಿದೇಶಾಂಗ ಸಚಿವ ಅಯೋನಿಸ್ ಕಸೌಲಿಡಿಸ್ ಪ್ರಶಂಸಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು