ನವದೆಹಲಿ: ದೇಶದ ಮಣಿಪುರ ರಾಜ್ಯ ಸೇರಿದಂತೆ ತಜಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಮಣಿಪುರದ ನೋನಿ ಜಿಲ್ಲೆಯಲ್ಲಿ ಬೆಳಗ್ಗೆ 3 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಮಿಯಿಂದ 25 ಕೀ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ.
ತಜಕಿಸ್ತಾನದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾದರೆ, ಅಫ್ಗಾನಿಸ್ತಾನದಲ್ಲಿ 4.1 ತೀವ್ರತೆ ದಾಖಲಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ತಕ್ಷಣಕ್ಕೆ ಉಭಯ ದೇಶಗಳಲ್ಲಿ ಯಾವುದೇ ಆಸ್ತಿ–ಪಾಸ್ತಿ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕಳೆದ ವಾರದಲ್ಲಿ ತಜಕಿಸ್ತಾನ ಹಾಗೂ ಅಫ್ಗಾನಿಸ್ತಾನ ಐದಾರು ಭಾರಿ ಭೂಕಂಪವಾಗಿದೆ. ತೀವ್ರತೆಯ ಪ್ರಮಾಣ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಲ್ಲಿನ ಸರ್ಕಾರಗಳು ಮಾಹಿತಿ ನೀಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.