ನವದೆಹಲಿ: ರಾಜಸ್ಥಾನ ಹಾಗೂ ಅರುಣಾಚಲ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಎಸ್) ಪ್ರಕಾರ, ರಾಜಸ್ಥಾನದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ಮತ್ತು ಅರುಣಾಚಲ ಪ್ರದೇಶದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ.
ಅರುಣಾಚಲದ ಪ್ರದೇಶ ಚಾಂಗ್‍ಲಾಂಗ್‌ನಲ್ಲಿ 76 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್‌ಸಿಎಎಸ್ ಮಾಹಿತಿ ನೀಡಿದೆ.
ಮತ್ತೊಂದೆಡೆ ರಾಜಸ್ಥಾನದ ಬಿಕಾನೇರ್‌ನಿಂದ ಪಶ್ಚಿಮಕ್ಕೆ 516 ಕಿ.ಮೀ. ದೂರದಲ್ಲಿ 8 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.