ಗುವಾಹಟಿ: ಅಸ್ಸಾಂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಬೆಳಿಗ್ಗೆ 8.39ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಮಧ್ಯ ಅಸ್ಸಾಂನ ನಾಗೌನ್ ಪ್ರದೇಶದ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದಿಂದಾಗಿ ಯಾವುದೇ ಸಾವು ನೋವು ಸಂಭವಿಸಿದ, ಆಸ್ತಿ ನಷ್ಟವಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪ ಸಂಭವಿಸಿದ ಸ್ಥಳ ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ತೇಜ್‌ಪುರದಿಂದ ಪಶ್ಚಿಮಕ್ಕೆ 40 ಕಿ.ಮೀ ದೂರದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಈಶಾನ್ಯ ರಾಜ್ಯಗಳು ಹೆಚ್ಚಿನ ಭೂಕಂಪನ ವಲಯದಲ್ಲಿದ್ದು, ಈ ಪ್ರದೇಶದಲ್ಲಿ ಆಗಾಗ್ಗೆ ಭೂಕಂಪ ಸಂಭವಿಸುತ್ತಿರುತ್ತದೆ. ಏಪ್ರಿಲ್ 25ರಂದು ಅಸ್ಸಾಂನಲ್ಲಿ ಎರಡು ಭಾರಿ ಲಘು ಭೂಕಂಪ ಸಂಭವಿಸಿತ್ತು. ಈ ಪ್ರದೇಶದಲ್ಲಿ ಏಪ್ರಿಲ್ 28ರಂದು 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.