ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ ಲಡಾಕ್‌ ಗಡಿಯಲ್ಲಿ ಚಟುವಟಿಕೆ: ಭಾರತ–ಚೀನಾ ಚರ್ಚೆ

Last Updated 22 ಫೆಬ್ರುವರಿ 2023, 16:11 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ಲಡಾಕ್‌ನ ವಾಸ್ತವ ನಿಯಂತ್ರಣ ರೇಖೆ ಬಳಿ ಗಡಿ ಸಂಘರ್ಷಕ್ಕೆ ಕಾರಣವಾಗಿರುವ ಕೆಲ ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ನಡೆಸಬಾರದು ಎಂಬ ಪ್ರಸ್ತಾವನೆ ಕುರಿತು ಚೀನಾದ ಬೀಜಿಂಗ್‌ನಲ್ಲಿ ಭಾರತ ಮತ್ತು ಚೀನಾ ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಿದವು.

ಭಾರತ–ಚೀನಾ ಗಡಿ ಬಿಕ್ಕಟ್ಟು ಸಮಾಲೋಚನೆ ಮತ್ತು ಸಹಯೋಗ ಕುರಿತ ಕಾರ್ಯಕಾರಿ ಮಂಡಳಿ ಸಭೆಯಲ್ಲಿ (ಡಬ್ಲ್ಯುಎಂಸಿಸಿ) ಈ ಕುರಿತು ಪ್ರಸ್ತಾಪಿಸಲಾಯಿತು. ಚೀನಾ ಮತ್ತು ಭಾರತದ ನಡುವೆ ಸದ್ಯ ಅಸ್ಥಿತ್ವದಲ್ಲಿರುವ ಒಪ್ಪಂದಗಳು ಮತ್ತು ರಾಜತಾಂತ್ರಿಕ ನಿಯಮಾವಳಿಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ 18 ಸುತ್ತಿನ ಸಭೆ ಆಯೋಜಿಸಲು ಉಭಯ ದೇಶಗಳು ಒಪ್ಪಿಗೆ ಸೂಚಿದವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಆದರೆ, ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಖಚಿತ ಮಾಹಿತಿ ದೊರೆತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT