ಮಂಗಳವಾರ, ಅಕ್ಟೋಬರ್ 19, 2021
23 °C

ಗಡಿ ಬಿಕ್ಕಟ್ಟು: ಅ.10ಕ್ಕೆ ಭಾರತ–ಚೀನಾ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವಲಡಾಖ್‌ನಲ್ಲಿನ ಗಡಿ ಬಿಕ್ಕಟ್ಟು ಶಮನಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಭಾನುವಾರ (ಅ.10) ಮಿಲಿಟರಿ ಅಧಿಕಾರಿಗಳ ನಡುವೆ 13ನೇ ಸುತ್ತಿನ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಚೀನಾ ಅಧೀನಕ್ಕೆ ಒಳಪಟ್ಟ ಪ್ರದೇಶದಲ್ಲಿರುವ ಮೊಲ್ಡೊ ಗಡಿ ಠಾಣೆಯಲ್ಲಿ ಬೆಳಿಗ್ಗೆ 10.30ಕ್ಕೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಉತ್ತರಾಖಂಡದ ಬಾರಾಹೋತಿ ಸೆಕ್ಟರ್‌ ಹಾಗೂ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಇತ್ತೀಚೆಗೆ ಚೀನಾ ಯೋಧರ  ಅತಿಕ್ರಮಣ ಯತ್ನವನ್ನು ಭಾರತೀಯ ಸೇನಾಪಡೆಗಳು ವಿಫಲಗೊಳಿಸಿದ್ದವು. ಈ ಘಟನೆಗಳ ಹಿನ್ನೆಲೆಯಲ್ಲಿ 13ನೇ ಸುತ್ತಿನ ಮಾತುಕತೆ ಆಯೋಜಿಸಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.

ಸಂಘರ್ಷಪೀಡಿತ ಇತರ ಸ್ಥಳಗಳಿಂದ ಯೋಧರನ್ನು ತ್ವರಿತವಾಗಿ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬುದಕ್ಕೆ ಭಾರತ ಈ ಮಾತುಕತೆ ವೇಳೆ ಒತ್ತು ನೀಡುವ ನಿರೀಕ್ಷೆ ಇದೆ. ಡೆಪ್ಸಾಂಗ್ ಹಾಗೂ ಡೆಮ್‌ಚೊಕ್‌ಗೆ ಸಂಬಂಧಿಸಿ ನಿರ್ಣಯ ಅಂಗೀಕರಿಸಬೇಕು ಎಂಬುದನ್ನು ಸಹ ಭಾರತ ಪ್ರಸ್ತಾಪಿಸಲಿದೆ ಎಂದು ಇವೇ ಮೂಲಗಳು ಹೇಳಿವೆ.

ಉಭಯ ದೇಶಗಳ ಮಿಲಿಟರಿ ಅಧಿಕಾರಿ ನಡುವಿನ 12ನೇ ಸುತ್ತಿನ ಮಾತುಕತೆ ಜುಲೈ 31ರಂದು ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು