ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!

Last Updated 31 ಜುಲೈ 2021, 10:31 IST
ಅಕ್ಷರ ಗಾತ್ರ

ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್‌ ಶುಲ್ಲೈ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ.

ಕಳೆದವಾರವಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕ ಶುಲ್ಲೈ, ‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿರುವ ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರವನ್ನು ಸೇವಿಸಲು ಸ್ವತಂತ್ರರು ಎಂದು ಹೇಳಿದ್ದಾರೆ.

ನೆರೆಯ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಆ ಹೊಸ ಕಾನೂನಿಂದ ಮೇಘಾಲಯಕ್ಕೆ ಜಾನುವಾರ ಸಾಗಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT