ಶುಕ್ರವಾರ, ಜನವರಿ 27, 2023
17 °C

ಟಿಆರ್‌ಎಸ್‌ ಹೆಸರು ಬದಲಾವಣೆ: ಚುನಾವಣಾ ಆಯೋಗ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎಂದು ಬದಲಿಸುವುದಕ್ಕೆ ಚುನಾವಣಾ ಆಯೋಗವು ಸಮ್ಮತಿ ಸೂಚಿಸಿದೆ.

ಈ ಕುರಿತು ಆಯೋಗವು ಗುರುವಾರ ಬಿಆರ್‌ಎಸ್‌ ಮುಖ್ಯಸ್ಥ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರಿಗೆ ಪತ್ರ ರವಾನಿಸಿದೆ.

‘ಟಿಆರ್‌ಎಸ್‌ ಪಕ್ಷಕ್ಕೆ ಬಿಆರ್‌ಎಸ್ ಎಂದು ಮರುನಾಮಕರಣ ಮಾಡಲು ಅನುಮತಿ ನೀಡುವಂತೆ ನೀವು ಅಕ್ಟೋಬರ್‌ 5ರಂದು ಪತ್ರ ಬರೆದಿದ್ದಿರಿ. ನಿಮ್ಮ ಮನವಿಯನ್ನು ಪುರಸ್ಕರಿಸಲಾಗಿದೆ. ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು’ ಎಂದು ಆಯೋಗವು ತನ್ನ ಪತ್ರದಲ್ಲಿ ತಿಳಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು