ಬುಧವಾರ, ಅಕ್ಟೋಬರ್ 20, 2021
25 °C

ಹಿಂಸಾಚಾರ ಸಾಧ್ಯತೆ: ಪಶ್ಚಿಮ ಬಂಗಾಳದಲ್ಲಿ ಸಂಭ್ರಮಾಚರಣೆಗೆ ಚುನಾವಣೆ ಆಯೋಗ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಹಿಂಸಾಚಾರ ಸಾಧ್ಯತೆ ಇರುವುದರಿಂದ ಉಪಚುನಾವಣೆ ಫಲಿತಾಂಶದ ಆಧಾರದ ಮೇಲೆ ಯಾವುದೇ ರೀತಿಯ ಸಂಭ್ರಮಾಚರಣೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಚುನಾವಣಾ ಆಯೋಗವು (ಇ.ಸಿ) ಭಾನುವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಎಚ್‌.ಕೆ.ದ್ವಿವೇದಿ ಅವರಿಗೆ ಸೂಚಿಸಿದೆ.

'ಚುನಾವಣೆ ನಂತರದ ಹಿಂಸಾಚಾರವು ಸಂಭವಿಸದಂತೆ ರಾಜ್ಯ ಸರ್ಕಾರವು ಕ್ರಮಗಳನ್ನು ಕೈಗೊಳ್ಳಬೇಕು. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಮತ ಎಣಿಕೆ ಸಮಯದಲ್ಲಿ, ನಂತರ ಯಾವುದೇ ವಿಜಯೋತ್ಸವ ಅಥವಾ ಮೆರವಣಿಗೆಗೆ ಅನುಮತಿಯಿಲ್ಲ ಎಂದು ಇಸಿ ಕಾರ್ಯದರ್ಶಿ ರಾಕೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

'ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಅಂತಹ ಎಲ್ಲಾ ಚಟುವಟಿಕೆಗಳನ್ನು ಈಗಾಗಲೇ ನಿಷೇಧಿಸಿರುವ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚುನಾವಣೆಯ ನಂತರದ ಹಿಂಸಾಚಾರಕ್ಕೆ ಆಸ್ಪದ ಮಾಡಿಕೊಡದಂತೆ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು' ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಭವಾನಿಪುರ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುನ್ನಡೆ ಕಾಯ್ದುಕೊಂಡ ವಿಚಾರ ತಿಳಿದ ಟಿಎಂಸಿ ಕಾರ್ಯಕರ್ತರು ಸಂಭ್ರಮಾಚರಿಸಲು ಬೀದಿಗಿಳಿದ್ದರು. ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭೆ ಉಪಚುನಾವಣೆ ಫಲಿತಾಂಶದಲ್ಲೂ ಪಕ್ಷದ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುಂದಿರುವುದು ಸಂಭ್ರಮವನ್ನು ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಚುನಾವಣೆ ಆಯೋಗ ಪತ್ರ ಬರೆದಿದೆ.

ಭವಾನಿಪುರ ಕ್ಷೇತ್ರದಲ್ಲಿ ಮಮತಾರ ಪ್ರತಿಸ್ಪರ್ಧಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಅವರು ಶನಿವಾರ ರಾತ್ರಿ ಕೋಲ್ಕತ್ತ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಅವರಿಗೆ ಪತ್ರ ಬರೆದು, ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಹಿಂಸಾಚಾರಗಳಾಗದಂತೆ ತಡೆಯಲು ಪೊಲೀಸರಿಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು