ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರ ತಯಾರಿಸಿದ ಚುನಾವಣಾ ಆಯೋಗ

Last Updated 30 ಡಿಸೆಂಬರ್ 2022, 7:40 IST
ಅಕ್ಷರ ಗಾತ್ರ

ನವದೆಹಲಿ: ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಪ್ರಮುಖ ಕ್ರಮದಲ್ಲಿ ಕೇಂದ್ರ ಚುನಾವಣಾ ಆಯೋಗವು ದೇಶೀಯ ವಲಸೆ ಮತದಾರರಿಗಾಗಿ ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರವನ್ನು (ಆರ್‌ವಿಎಂ) ಅಭಿವೃದ್ಧಿಪಡಿಸಿದೆ.

ಜನವರಿ 16ರಂದು ಇದರ ಪ್ರದರ್ಶನಕ್ಕೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಆಹ್ವಾನ ನೀಡಿದೆ.

ಈ ಕುರಿತಂತೆ ಚರ್ಚೆ ನಡೆದು ಜಾರಿಗೆ ಬಂದರೆ, ವಲಸೆ ಕಾರ್ಮಿಕರು ಮತದಾನ ಮಾಡಲು ತಮ್ಮ ತವರು ಕ್ಷೇತ್ರಕ್ಕೆ ಹೋಗುವ ಅಗತ್ಯವೇ ಇರುವುದಿಲ್ಲ. ಇದ್ದಲ್ಲಿಯೇ ಮತದಾನ ಮಾಡಬಹುದು.

ಚುನಾವಣಾ ಆಯೋಗವು ರಿಮೋಟ್ ಮತದಾನದ ಪರಿಕಲ್ಪನೆಯನ್ನು ತೇಲಿಬಿಟ್ಟಿದ್ದು, ಅದನ್ನು ಕಾರ್ಯಗತಗೊಳಿಸುವಲ್ಲಿ ಕಾನೂನು, ಆಡಳಿತಾತ್ಮಕ ಮತ್ತು ತಾಂತ್ರಿಕ ಸವಾಲುಗಳ ಕುರಿತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಕೇಳಿದೆ.

ಸಾರ್ವಜನಿಕ ವಲಯದ ಉದ್ಯಮದಿಂದ ಅಭಿವೃದ್ಧಿಪಡಿಸಲಾಗಿರುವ ರಿಮೋಟ್ ಇವಿಎಂ ಇದಾಗಿದ್ದು, ಒಂದೇ ಮತಗಟ್ಟೆಯಿಂದ 72 ಕ್ಷೇತ್ರಗಳನ್ನು ನಿರ್ವಹಿಸಬಹುದಾಗಿದೆ.

‘ಮತದಾನದ ಬಗ್ಗೆ ಯುವಕರು ಮತ್ತು ನಗರದ ನಿವಾಸಿಗಳ ನಿರಾಸಕ್ತಿಗಳ ಬಗ್ಗೆ ಗಮನ ಹರಿಸಿದ ನಂತರ, ರಿಮೋಟ್ ಮತದಾನವು ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಬಲಪಡಿಸುವ ಪರಿವರ್ತನೆಯ ಉಪಕ್ರಮವಾಗಿದೆ’ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT