ಮಂಗಳವಾರ, ಏಪ್ರಿಲ್ 20, 2021
26 °C
ಸಂಜೆ 4.30ಕ್ಕೆ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ

ತಮಿಳುನಾಡು, ಕೇರಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಇಂದು) ಸಂಜೆ ವೇಳೆಗೆ ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.

ಚುನಾವಣಾ ಸಮಿತಿ ಇಂದು ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದೆ.

ನಾಲ್ಕು ರಾಜ್ಯಗಳಲ್ಲಿರುವ ಸರ್ಕಾರದ ಆಡಳಿತದ ಅವಧಿ ಮೇ ಮತ್ತು ಜೂನ್ ತಿಂಗಳಲ್ಲಿ ಕೊನೆಗೊಳ್ಳಲಿದೆ. ಪುದುಚೇರಿಯಲ್ಲಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಸೋತ ಕಾರಣ, ಅಲ್ಲೀಗ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು