ಶುಕ್ರವಾರ, ಅಕ್ಟೋಬರ್ 23, 2020
27 °C

ವೃದ್ಧರು, ಅಂಗವಿಕಲರ ಮನೆಬಾಗಿಲಿಗೆ ಅಂಚೆ ಮತಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಂಗವಿಕಲರು ಮತ್ತು 80 ವರ್ಷಕ್ಕೂ ಮೇಲ್ಪಟ್ಟ ವೃದ್ಧರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಸುಲಭಗೊಳಿಸಿದೆ.

ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುವುದನ್ನು ಆಯ್ಕೆ ಮಾಡಿಕೊಳ್ಳುವ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮತಗಟ್ಟೆ ಅಧಿಕಾರಿಗಳೇ ‘12–ಡಿ‘ ಅರ್ಜಿ ನಮೂನೆಯನ್ನು ಅವರ ಮನೆಗೆ ತಲುಪಿಸುತ್ತಾರೆ.

ಚುನಾವಣಾ ಅಧಿಸೂಚನೆ ಹೊರಡಿಸಿದ ಐದು ದಿನಗಳ ಒಳಗೆ ಭರ್ತಿ ಮಾಡಿದ 12–ಡಿ ಅರ್ಜಿ ನಮೂನೆಯನ್ನು ಪಡೆದು ಚುನಾವಣಾಧಿಕಾರಿಗಳಿಗೆ ಮತಗಟ್ಟೆ ಅಧಿಕಾರಿಗಳು ತಲುಪಿಸಬೇಕು ಎಂದು ಚುನಾವಣಾ ಆಯೋಗವು ಎಲ್ಲ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಚುನಾವಣಾಧಿಕಾರಿಯು ನಿಯೋಜಿಸುವ ಚುನಾವಣಾ ತಂಡಗಳು ಪೂರ್ವ ನಿಗದಿಪಡಿಸಿದ ದಿನಾಂಕಗಳಂದು ಅಂಚೆ ಮತಪತ್ರವನ್ನು ತಲುಪಿಸುತ್ತವೆ. ಬಳಿಕ, ಅಂಚೆ ಮತಪತ್ರ ಪಡೆದು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ ಎಂದು ಆಯೋಗವು ತಿಳಿಸಿದೆ.

ನೌಕರಿಯಲ್ಲಿರುವವರಿಗೆ ನೀಡುವ ಅಂಚೆ ಮತಪತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ಇಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ. ಜತೆಗೆ, ಅಧಿಕಾರಿಗಳೇ ಮತಪತ್ರವನ್ನು ತಲುಪಿಸುತ್ತಾರೆ ಮತ್ತು ಪಾರದರ್ಶಕತೆಯನ್ನು ಕಾಪಾಡಲು ವಿಡಿಯೊ ಚಿತ್ರೀಕರಣ ಮಾಡಲಾಗುತ್ತದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈ ಹೊಸ ಸೂಚನೆಯು ಎಲ್ಲ ಚುನಾವಣೆಗಳಿಗೆ ಮತ್ತು ಉಪಚುನಾವಣೆಗಳಿಗೆ ಅನ್ವಯವಾಗಲಿದೆ. ಕಳೆದ ವಾರ ಘೋಷಿಸಿದ 56 ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೂ ಇದು ಜಾರಿಯಾಗಲಿದೆ ಎಂದು ಆಯೋಗ ತಿಳಿಸಿದೆ.

ಕಳೆದ ವಾರ ಬಿಹಾರಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳ ಮನವಿಗೆ ಸ್ಪಂದಿಸಿ ಈ ಕ್ರಮಕೈಗೊಳ್ಳಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು