ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೋತ್ಸವ ಆಚರಿಸಿದರೆ ಎಫ್‌ಐಆರ್‌: ಚುನಾವಣಾ ಆಯೋಗ ಆದೇಶ

ಆಯಾ ಪೊಲೀಸ್‌ ಠಾಣೆಯ ಅಧಿಕಾರಿ ಅಮಾನತುಗೊಳಿಸಲು ಸೂಚನೆ
Last Updated 2 ಮೇ 2021, 10:33 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದ ಬಳಿಕ ವಿಜಯೋತ್ಸವ ಆಚರಿಸುವವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಮತ್ತು ಸಂಬಂಧಿಸಿದ ಪೊಲೀಸ್‌ ಠಾಣೆಯ ಮುಖ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಆಯೋಗ ಸೂಚನೆ ನೀಡಿದೆ. ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ ಆಯ್ಕೆಯಾದ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಆಚರಿಸುತ್ತಿರುವುದನ್ನು ಗಮನಿಸಿ ಆಯೋಗ ಈ ಆದೇಶ ಹೊರಡಿಸಿದೆ.

‘ಆಯೋಗವು ವಿಜಯೋತ್ಸವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ. ಕ್ರಮ ಕೈಗೊಂಡಿರುವ ಬಗ್ಗೆ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ’ ಎಂದು ಆಯೋಗದ ವಕ್ತಾರರು ತಿಳಿಸಿದ್ದಾರೆ.

ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿ ಚುನಾವಣಾ ಆಯೋಗ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಕೋವಿಡ್‌ ಹರಡುವಿಕೆಯನ್ನು ತಡೆಯುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT