ಜ.23ರಿಂದ ಚುನಾವಣಾ ಆಯೋಗದ ಸಮಾವೇಶ

ನವದೆಹಲಿ: ‘ತಂತ್ರಜ್ಞಾನದ ಬಳಕೆ ಮತ್ತು ಚುನಾವಣೆಯ ಸಮಗ್ರತೆ’ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗವು ಹಮ್ಮಿಕೊಂಡಿರುವ ಎರಡನೇ ಅಂತರರಾಷ್ಟ್ರೀಯ ಸಮಾವೇಶವು ಸೋಮವಾರದಿಂದ ಇಲ್ಲಿ ಆರಂಭವಾಗಲಿದೆ.
ಎರಡು ದಿನಗಳ ಸಮಾವೇಶವನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಉದ್ಘಾಟಿಸುವರು ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
17 ದೇಶಗಳ/ಚುನಾವಣಾ ನಿರ್ವಹಣಾ ಸಂಸ್ಥೆಗಳ 43 ಮಂದಿ ಪ್ರತಿನಿಧಿಗಳು ಮತ್ತು ಅಂತರರಾಷ್ಟ್ರೀಯ ಸಂಘಟನೆಗಳ 6 ಮಂದಿ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದೂ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.