ಕೋವಿಡ್ ಹೆಚ್ಚಳ: ಸಿಂದಗಿ ಕ್ಷೇತ್ರಕ್ಕೆ ಸದ್ಯಕ್ಕಿಲ್ಲ ಉಪಚುನಾವಣೆ–ಚುನಾವಣಾ ಆಯೋಗ

ನವದೆಹಲಿ: ರಾಜ್ಯದ ಸಿಂದಗಿ ವಿಧಾನಸಭೆ ಕ್ಷೇತ್ರ ಸೇರಿದಂತೆ ದೇಶದಾದ್ಯಂತ ವಿವಿಧ ಕಾರಣಗಳಿಂದ ಖಾಲಿಯಾಗಿರುವ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳಿಗೆ ಸದ್ಯಕ್ಕೆ ಉಪ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.
ಕೋವಿಡ್–19 ದ್ವಿತೀಯ ಅಲೆಯು ಗಂಭೀರ ಪರಿಣಾಮ ಉಂಟು ಮಾಡಿರುವ ಕಾರಣ ಉಪ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಪರಿಸ್ಥಿತಿ ಸಾಮಾನ್ಯ ಹಂತಕ್ಕೆ ಬಂದ ನಂತರ ಈ ಸಂಬಂಧ ತೀರ್ಮಾನ ಕೈಗೊಳ್ಳುವುದಾಗಿ ಆಯೋಗ ಹೇಳಿದೆ.
ಇದನ್ನೂ ಓದಿ– Covid-19 Karnataka Update: ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು
ದೇಶದ 3 ಲೋಕಸಭೆ ಹಾಗೂ 8 ವಿಧಾನಸಭೆ ಕ್ಷೇತ್ರಗಳು ಖಾಲಿ ಇವೆ. ನಿಯಮಾನುಸಾರ ಖಾಲಿ ಆದ 6 ತಿಂಗಳೊಳಗೆ ಉಪ ಚುನಾವಣೆ ನಡೆಸಬೇಕಿದೆ. ಆದರೆ, ತೀವ್ರವಾಗಿ ಹರಡುತ್ತಿರುವ ಕೋವಿಡ್–19 ಸ್ಥಿತಿ ಸುಧಾರಣೆಯಾದ ನಂತರ ಉಪ ಚುನಾವಣೆ ಹಮ್ಮಿಕೊಳ್ಳುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭೆ ಕ್ಷೇತ್ರ ತೆರವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.