ಗುರುವಾರ , ಮೇ 13, 2021
40 °C

ಜೀವಕ್ಕಿಂತ ಲಾಭ ಗಳಿಕೆ ಮುಖ್ಯವಾಗಬಾರದು: ದೆಹಲಿ ಹೈಕೋರ್ಟ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ‌): ಅಮೂಲ್ಯ ಜೀವಗಳನ್ನು ರಕ್ಷಿಸುವುದಕ್ಕಿಂತ ಆರ್ಥಿಕವಾಗಿ ಲಾಭ ಗಳಿಸುವುದು ಮುಖ್ಯವಾಗಬಾರದು.  ಏ. 22ರವರೆಗೆ ಕಾಯುವ ಬದಲು, ಕೈಗಾರಿಕೆಗಳಲ್ಲಿ ಆಮ್ಲಜನಕ ಬಳಕೆ ಮೇಲೆ ಕೂಡಲೇ ನಿಷೇಧ ಹೇರುವಂತೆ ದೆಹಲಿ ಹೈಕೋರ್ಟ್‌ ಮಂಗಳವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ದೆಹಲಿಯ ಅನೇಕ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್‌–19 ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಹಾಗೂ ರೇಖಾ ಪಳ್ಳಿ ಅವರಿರುವ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

‘ವಿವಿಧ ಆಸ್ಪತ್ರೆಗಳಲ್ಲಿನ ಆಮ್ಲಜನಕ 4–8 ಗಂಟೆಗಳಲ್ಲಿ ಕೊನೆಗೊಳ್ಳಲಿದೆ. ಇಂಥ ಸಂದರ್ಭದಲ್ಲಿ ಕೈಗಾರಿಕೆಗಳಲ್ಲಿ ಆಮ್ಲಜನಕ ಬಳಕೆಯನ್ನು ಏ. 22ರಿಂದ ನಿಷೇಧಿಸಲಾಗುವುದು ಎಂಬುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಆಮ್ಲಜನಕ ಉತ್ಪಾದಿಸುವ ಕಂಪನಿ ಇನಾಕ್ಸ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತು. ಕೋರ್ಟ್‌ ಆದೇಶವನ್ನು ಪಾಲನೆ ಮಾಡದ ಕಾರಣ ಕಂಪನಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬಾರದೇಕೆ ಎಂದು ಪ್ರಶ್ನಿಸಿದ ಹೈಕೋರ್ಟ್‌, ಏ. 22ರಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೋರ್ಟ್‌ಗೆ ಹಾಜರಾಗಬೇಕು ಎಂದೂ ನಿರ್ದೇಶನ ನೀಡಿತು.

ಮುಂದಿನ ವಿಚಾರಣೆ ವೇಳೆ, ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಯೂ ಹಾಜರಿರಬೇಕು ಎಂದು ನ್ಯಾಯಪೀಠ ಸೂಚಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು