ಬುಧವಾರ, ಫೆಬ್ರವರಿ 1, 2023
27 °C

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾರನ್ನು ಬಂಧಿಸಿದ್ದಾರೆ.

ಅರೋರಾ, ಗುರುಗ್ರಾಮದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ. ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ 6ನೇ ಬಂಧನ ಇದಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯ ವಿವಿಧ ಸೆಕ್ಷನ್‌ಗಳಡಿ ಕಳೆದ ರಾತ್ರಿ ಅವರನ್ನು ಬಂಧಿಸಲಾಗಿದೆ.

ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ.

ಸಿಬಿಐ ಎಫ್‌ಐಆರ್ ಆಧರಿಸಿ ಇ.ಡಿ ದೇಶದ ವಿವಿಧೆಡೆ ದಾಳಿಗಳನ್ನು ಸಂಘಟಿಸಿತ್ತು.

ಈ ಕುರಿತಂತೆ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದ ಸಿಬಿಐ, ಅಮಿತ್ ಅರೋರಾ ಮತ್ತು ಆತನ ಸಂಗಡಿಗರಾದ ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆಯನ್ನು ಆರೋಪಿಗಳೆಂದು ಹೇಳಿತ್ತು. ಈ ಮೂವರೂ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತರು ಎಂದೂ ಸಿಬಿಐ ಆರೋಪಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು